ಬ್ರಹ್ಮಾವರ: ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ

Spread the love

ಬ್ರಹ್ಮಾವರ: ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ

ಉಡುಪಿ: ವ್ಯಕ್ತಿಯೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.

ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದು, ಸುಮಾರು 9.30 ರ ಸುಮಾರಿಗೆ ಊಟ ಮಾಡುತ್ತಿರುವಾಗ ದುಷ್ಕರ್ಮಿಗಳು ಆಗಮಿಸಿ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿದ್ದು ಪಟಾಕಿ ಶಬ್ದ ಎಂದು ಸುಮ್ಮನಾಗಿದ್ದರು ಎನ್ನಲಾಗಿದೆ. ಮುಂಜಾನೆ ಕೃತ್ಯ ಬೆಳಕಿಗೆ ಬಂದಿದೆ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿದ್ದಾರೆ.


Spread the love