
ಭಾರತೀಯ ಸೇನಾ ವಿಮಾನ ಪತನ : ಹಿರಿಯ ಸುಪ್ರೀಂ ಕೋರ್ಟ್ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಸ ಬೇಕು ಸುಬ್ರಹ್ಮಣ್ಯನ್ ಸ್ವಾಮಿ
ಉಡುಪಿ: ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ ಪ್ರಕರಣವನ್ನು ಹಿರಿಯ ಸುಪ್ರೀಂಕೋರ್ಟ್ ಜಡ್ಜ್ ಮೂಲಕ ತನಿಖೆ ನಡೆಸಬೇಕು ಎಂದು ಹಿರಿಯ ಬಿಜೆಪಿ ನಾಯಕ ರಾಜ್ಯಸಭಾ ಸದಸ್ಯ ಸುಬ್ರಮಣ್ಯಸ್ವಾಮಿ ಹೇಳಿದ್ದಾರೆ.
ಅವರು ಬುಧವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ ನಿಜಕ್ಕೂ ದುರದೃಷ್ಟಕರ ವಿಚಾರವಾಗಿದ್ದು ಈ ಪ್ರಕರಣದ ಬಗ್ಗೆ ಗಂಭೀರ ತನಿಖೆ ಆಗಬೇಕಿದೆ. ಪ್ರಕರಣದಲ್ಲಿ ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಪ್ರಯೋಜನವಿಲ್ಲ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು ಎಂದರು.
ದುರಂತದಲ್ಲಿ ಬೇರೆ ದೇಶದ ಕೈವಾಡದ ಬಗ್ಗೆ ಪ್ರತಿಕ್ರಿಯಿಸಿದ ಅವರು ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಮತ್ತು ಇದರ ಬಗ್ಗೆ ದೇಶದ ಪ್ರಧಾನಿಗಳು ಜನರಿಗೆ ಸೂಕ್ತ ಮಾಹಿತಿ ನೀಡಬೇಕು. ದೇಶದ ಸುರಕ್ಷತೆಯ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆ ಯಾಗಿದೆ ಎಂದರು.