ಭಾರತ ಐಕ್ಯತಾ ಯಾತ್ರೆಗೆ ಬ್ರಹ್ಮಾವರ ಬ್ಲಾಕ್ ವತಿಯಿಂದ ಅತೀ ಹೆಚ್ಚು ಕಾರ್ಯಕರ್ತರು ಭಾಗವಹಿಸಲು ನಿರ್ಧಾರ

Spread the love

ಭಾರತ ಐಕ್ಯತಾ ಯಾತ್ರೆಗೆ ಬ್ರಹ್ಮಾವರ ಬ್ಲಾಕ್ ವತಿಯಿಂದ ಅತೀ ಹೆಚ್ಚು ಕಾರ್ಯಕರ್ತರು ಭಾಗವಹಿಸಲು ನಿರ್ಧಾರ

ಉಡುಪಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಗೆ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅತೀ ಹೆಚ್ಚು ಕಾರ್ಯಕರ್ತರು ಭಾಗವಹಿಸಲು ನಿರ್ಧರಿಸಲಾಗಿದೆ.

ಈ ಪ್ರಯುಕ್ತ ಬ್ರಹ್ಮಾವರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೆರೂರು ಅವರ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಈ ಬಗ್ಗೆ ತಿರ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಉಡುಪಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವಿನಯ್ ರಾಜ್ ಅವರು ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ 3600 ಕಿಮೀ ನಡೆಸಲಿರುವ ಭಾರತ ಜೋಡೋ ಪಾದಯಾತ್ರೆ ಇತಿಹಾಸದಲ್ಲಿ ದಾಖಲಾಗಲಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಯುವಕರು ಕೂಲಿ ಕಾರ್ಮಿಕರು, ಜನಸಾಮಾನ್ಯರು ತೊಂದರೆಯಲ್ಲಿದ್ದಾರೆ. ಇವೆಲ್ಲದರಿಂದ ಮುಕ್ತಿ ಪಡೆಯಬೇಕಾದರೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವತ್ತ ಈ ಪಾದಯಾತ್ರೆ ಮುನ್ನುಡಿಯಾಗಲಿದ್ದು ಎಲ್ಲಾ ಕಾರ್ಯಕರ್ತರು ಹುಮ್ಮಸ್ಸಿನಿಂದ ಭಾಗವಹಿಸಲು ಮನವಿ ಮಾಡಿದರು.

ಸಭೆಯಲ್ಲಿ ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೆರೂರು, ಬ್ರಹ್ಮಾವರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗಾಯತ್ರಿ ಕಾಂಗ್ರೆಸ್ ನಾಯಕರಾದ ಭುಜಂಗ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಪ್ರಭಾಕರ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love