ಭಾರಿ ಮಳೆಯ ನಡುವೆ ಉಡುಪಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಭಾರಿ ಮಳೆಯ ನಡುವೆ ಉಡುಪಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಉಡುಪಿ : ಬೆಳಿಗ್ಗೆನಿಂದ ಎಡಬಿಡದೇ ಸುರಿಯುತ್ತಿರುವ ಮಳೆಯ ನಡುವೆಯೂ ಉಡುಪಿ ಜಿಲ್ಲಾಡಳಿತ ವತಿಯಿಂದ , ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದಲ್ಲಿ ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

2018-19 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು , ಇತರ ಸಾಧಕರನ್ನು ಜಿಲ್ಲಾಧಿಕಾರಿಗಳು ಸನ್ಮಾನಿಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ಶಾಸಕ ರಘುಪತಿ ಭಟ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಜಿಪಂ ಕಾರ್ಯನಿರ್ವಹಣಧಿಕಾರಿ ಸಿಂಧೂ ರೂಪೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ ಚಂದ್ರ, ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ಇತರರು ಉಪಸ್ಥಿತರಿದ್ದರು.