ಭಾರೀ ಮಳೆ: ದಕ, ಉಡುಪಿ, ಕೊಡಗು ಜಿಲ್ಲೆ ಪದವಿ ಕಾಲೇಜಿಗೆ ಮಂಗಳವಾರ ರಜೆ ಘೋಷಣೆ

Spread the love

ಭಾರೀ ಮಳೆ: ದಕ, ಉಡುಪಿ, ಕೊಡಗು ಜಿಲ್ಲೆ ಪದವಿ ಕಾಲೇಜಿಗೆ ಮಂಗಳವಾರ ರಜೆ ಘೋಷಣೆ

ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸೋಮವಾರ ಸಂಜೆಯಿಂದ ಮತ್ತೆ ಮಳೆ ಬಿರುಸಾಗಿದ್ದು. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆ.14ರಂದು ಮಂಗಳವಾರ ಪದವಿ ಕಾಲೇಜುಗಳಿಗೂ ರಜೆಯನ್ನು ಘೋಷಿಷಿ ಪದವಿ ಕಾಲೇಜು ಇಲಾಖೆಯ ಜಂಟಿ ನಿರ್ದೇಶಕ ಮಹೇಶ್ ರಾವ್ ಆದೇಶ ಹೊರಡಿಸಿದ್ದಾರೆ.

ಮೂರು ಜಿಲ್ಲೆಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಮತ್ತೆ ರಭಸವಾಗಿ ಮಳೆ ಸುರಿಯುತ್ತಿದ್ದು ಮೂರು ಜಿಲ್ಲೆಗಳ ನದಿಗಳು ಬಹುತೇಕ ತುಂಬಿ ಹರಿಯುತ್ತಿದೆ.ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.


Spread the love