Spread the love
ಭಾರೀ ಮಳೆ: ನಾಳೆ (ಜೂ13) ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.13ರಂದು (ಶುಕ್ರವಾರ) ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಜಿಲ್ಲೆಯಲ್ಲಿ, ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಆದರೆ ಪದವಿ ಪೂರ್ವ ಕಾಲೇಜು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Spread the love