ಭಾರೀ ಮಳೆ: ಶಾಲೆಗಳಿಗೆ ರಜೆ ನೀಡುವ ಅಧಿಕಾರ ಬಿಇಒ ಗಳಿಗೆ ನೀಡಲಾಗಿದೆ – ಡಿಸಿ ವಿದ್ಯಾ ಕುಮಾರಿ

Spread the love

ಭಾರೀ ಮಳೆ: ಶಾಲೆಗಳಿಗೆ ರಜೆ ನೀಡುವ ಅಧಿಕಾರ ಬಿಇಒ ಗಳಿಗೆ ನೀಡಲಾಗಿದೆ – ಡಿಸಿ ವಿದ್ಯಾ ಕುಮಾರಿ

ಉಡುಪಿ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಅಗತ್ಯತೆ ಕಂಡು ಬಂದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಸ್ಥಳೀಯ ಬಿ ಇಒ ಗಳಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಕೆಲ ತಾಲೂಕಿನಲ್ಲಿ ಮಳೆಯಾಗುತ್ತಿದ್ದು, ಎಲ್ಲಾ ಏಳೂ ತಾಲೂಕಿನಲ್ಲಿ ನಿರಂತರ ಮಳೆಯಿಲ್ಲ. ರಾತ್ರಿ 10 ಗಂಟೆಯ ನಂತರ ಮಳೆ ಕೆಲವಡೆ ಕಡಿಮೆಯಾಗಿದ್ದು ಪರಸ್ಥಿತಿಯನ್ನು ನೋಡಿಕೊಂಡು ರಜೆ ಘೋಷಣೆ ಮಾಡುವ ಅಧಿಕಾರವನ್ನು ತಾಲೂಕು ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ಆದರೆ ಮುಂಜಾಗ್ರತಾ ಕ್ರಮವಾಗಿ ಕೆಲ ಶಾಲಾ ಆಡಳಿತ ಮಂಡಳಿಯವರೂ ಪರಿಸ್ಥಿತಿ ನೋಡಿಕೊಂಡು ರಜೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments