ಭಾರೀ ಮಳೆ ಹಿನ್ನೆಲೆ: ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ನಾಳೆ (ಆ.8) ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಆಗಸ್ಟ್ 8ರಂದು ಪುತ್ತೂರು ಉಪವಿಭಾಗದ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ತಹಶೀಲ್ದಾರರ ಮನವಿಯ ಮೇರೆಗೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು (12ನೇ ತರಗತಿಯವರೆಗೆ) ಸೇರಿದಂತೆ ಎಲ್ಲಾ ವಸತಿ ಶಾಲೆ-ಕಾಲೇಜುಗಳಿಗೆ ಈ ರಜೆ ಅನ್ವಯವಾಗಲಿದೆ.
ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ–2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.
