
Spread the love
ಮಂಗಳೂರಲ್ಲಿ ಯುವಕ ಸಾವು- ವೈದ್ಯರ ನಿರ್ಲಕ್ಷ್ಯ ಎಂದು ಆರೋಪ ಬಜರಂಗದಳ ಪ್ರತಿಭಟನೆ
ಮಂಗಳೂರು: ಪಿತ್ತಜನಕಾಂಗದ ಸಮಸ್ಯೆಗಾಗಿ ಮೂರು ದಿನಗಳಿಂದ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಭಾನುವಾರ ಮೃತಪಟ್ಟಿದ್ದಾರೆ. ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಬಜರಂಗದಳದವರು ಆರೋಪಿಸಿದ್ದಾರೆ.
ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(30) ಮೃತಪಟ್ಟ ಯುವಕ. ಹೊಟ್ಟೆ ನೋವು ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತ ಯುವಕನ ಶವವನ್ನು ವೆನ್ಲಾಕ್ ಆಸ್ಪತ್ರೆ ಬಳಿ ಇಟ್ಟು ಭಾನುವಾರ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಬಜರಂಗ ದಳ ಸಹಿತ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು.
Spread the love