ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ

Spread the love

ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯದ ನಗರಾಭಿವೃದ್ಧಿ ಹಾಗೂ ವಸತಿ ಸಚಿವರಾಗಿರುವ ಯು.ಟಿ. ಖಾದರ್ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಡಾ.ಭರತ್ ಶೆಟ್ಟಿ, ಮೇಯರ್ ಕೆ.ಭಾಸ್ಕರ್ ಮೊಯ್ಲಿ, ಉಪಮೇಯರ್ ಕೆ.ಮುಹಮ್ಮದ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಜಿಲ್ಲಾ ಎಸ್ಪಿರವಿಕಾಂತೇ ಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮಕ್ಕೆ ಮುನ್ನ ನಗರದ ಅಂಬೇಡ್ಕರ್ ವೃತ್ತದಿಂದ ನೆಹರೂ ಮೈದಾನದವರೆಗೆ ಮೆರವಣಿಗೆ ನಡೆಯಿತು. ವಿವಿಧ ಕ್ಷೇತ್ರದ ಸಾಧಕರಿಗೆ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.


Spread the love