ಮಂಗಳೂರಿನಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಯುವಕರಿಬ್ಬರಿಗೆ ಇರಿತ

Spread the love

ಮಂಗಳೂರಿನಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಯುವಕರಿಬ್ಬರಿಗೆ ಇರಿತ
ಮಂಗಳೂರು: ಬೈಕಿನಲ್ಲಿ ಆಗಮಿಸಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಯುವಕರಿಬ್ಬರಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೋಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಗೊಂಡ ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳನ್ನು ಮಂಜನಾಡಿ ನಿವಾಸಿ ನವಾಝ್ (25), ಶಮೀರ್ (19) ಎಂದು ಗುರುತಿಸಲಾಗಿದೆ.

assault-youth-mangalorean-com-20161111 ullal-assault-youth-mangalorean-com-20161112

ನವಾಜ್ ಅವರು ತನ್ನ ಮನೆಯ ಕಡೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ಹೊಟ್ಟೆಯ ಭಾಗಕ್ಕೆ ಚೂರಿಯಿಂದ ಬಲವಾಗಿ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ. ಅಲ್ಲಿಂದ ಮುಂದೆ ಹೋದ ದುಷ್ಕರ್ಮಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮೀರ್ ಎಂಬವರಿಗೆ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Spread the love
1 Comment
Inline Feedbacks
View all comments
7 years ago

This is unfortunate incedent making Innocent people to suffer.