ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ; ಲಂಚ ಸ್ವೀಕರಿಸುತ್ತಿದ್ದ ಇಂಜಿನಿಯರ್ ಬಲೆಗೆ

Spread the love

ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ; ಲಂಚ ಸ್ವೀಕರಿಸುತ್ತಿದ್ದ ಇಂಜಿನಿಯರ್ ಬಲೆಗೆ

ಮಂಗಳೂರು: ಜಿಲ್ಲಾ ಪಂಚಾಯತ್ ಕಚೇರಿಗೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತಿದ್ದ ಜಿಲ್ಲಾ ಪಂಚಾಯತ್ ನ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಬಲೆಗೆ ಬಿದ್ದಿದ್ದಾರೆ.

8 ಸಾವಿರ ರೂಪಾಯಿ ಲಂಚ ಸ್ವೀಕರಿಸುತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ರೂಪಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರೂಪಾ ಕಾಂಟ್ರಾಕ್ಟರ್ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದು, ಲಂಚ ಸ್ವೀಕರಿಸುವ ಸಂದರ್ಭ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ.

ಲೋಕಾಯುಕ್ತ ಎಸ್ ಪಿ ಸೈಮನ್ ಮತ್ತು ಡಿವೈಎಸ್ ಪಿ ಕಲಾವತಿ ಕೆ, ಚಲುವರಾಜ್ , ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.


Spread the love