ಮಂಗಳೂರಿನ ಬಟ್ಟೆಯಂಗಡಿಗೆ ಬೈಕಿನಲ್ಲಿ ಬಂದ ಅಪರಿಚಿತರಿಂದ ಶೂಟೌಟ್

Spread the love

ಮಂಗಳೂರಿನ ಬಟ್ಟೆಯಂಗಡಿಗೆ ಬೈಕಿನಲ್ಲಿ ಬಂದ ಅಪರಿಚಿತರಿಂದ ಶೂಟೌಟ್

ಮಂಗಳೂರು: ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ಇರುವ ಬಟ್ಟೆಯಂಗಡಿಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಶೂಟೌಟ್ ನಡೆಸಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ಸಂಜೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಎಂ ಸಂಜೀವ ಶೆಟ್ಟಿ ಸಿಲ್ಕ್ ಆ್ಯಂಡ್ ಸಾರಿಸ್ ಬಟ್ಟೆ ಅಂಗಡಿಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಶೂಟೌಟ್ ನಡೆಸಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಅಂಗಡಿಯ ಕಾವಲುಗಾರನಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ತಿಳಿಯುತ್ತಿದಂತೆ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್, ಎಸಿಪಿಗಳಾದ ಉದಯ ನಾಯ್ಕ್, ಮಂಜುನಾಥ ಶೆಟ್ಟಿ ಮತ್ತು ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆಯಲ್ಲಿ ಭೂಗತ ಪಾತಕಿಗಳು ಹಫ್ತಕ್ಕಾಗಿ ಕೃತ್ಯ ಎಸಗಿಸುವ ಶಂಕೆ ವ್ಯಕ್ತವಾಗಿದೆ.


Spread the love