ಮಂಗಳೂರಿನ ಯುವ ವಕೀಲೆ ಅಪಘಾತದಲ್ಲಿ ದುರ್ಮರಣ

Spread the love

ಮಂಗಳೂರಿನ ಯುವ ವಕೀಲೆ ಅಪಘಾತದಲ್ಲಿ ದುರ್ಮರಣ

ಮಂಗಳೂರು:  ಸಂಪ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವ ವಕೀಲರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರಿನ ಗಾಯತ್ರಿ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಫಸ್ಟ್‌ ನೀರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಕೀಲರಾದ ಗಾಯತ್ರಿ ವ್ಯಾಗನಾರ್ ಕಾರಿನಲ್ಲಿ ಸಂಪ್ಯದಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಸ್‌ಡಿಎಂ ಕಾಲೇಜಿನ ಗೌರವ ಉಪನ್ಯಾಸಕರೂ ಆಗಿದ್ದ ಮಂಗಳೂರಿನ ಹಿರಿಯ ವಕೀಲ ಪೃಥ್ವಿರಾಜ್ ರೈ ಅವರ ಜ್ಯೂನಿಯರ್ ಎಡ್ವೊಕೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಾಯತ್ರಿ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love