ಮಂಗಳೂರು। ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣಪಾಲೆಮಾರ್
ಮಂಗಳೂರು: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಹಾದಿಯ ಸವಿನೆನಪಿಗಾಗಿ ಕರಾವಳಿ ಜನತೆಗೆ ಸಂದ ವಿಶಿಷ್ಟ ಕೊಡುಗೆ ಮಂಗಳೂರಿನ ನಾಲ್ಕು ಕಡೆಗಳಲ್ಲಿ ನಾಲ್ಕು ಅತ್ಯಾಧುನಿಕ ಸಭಾಂಗಣಗಳು ಉದ್ಘಾಟನೆ ಗೊಳ್ಳಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.
ಕರಾವಳಿಯ ಹೆಮ್ಮೆಯ ಹಾಗೂ ಅತ್ಯಂತ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ಲ್ಯಾಂಡ್ ಲಿಂಕ್ಸ್ ಕರಾವಳಿ ಭಾಗದಲ್ಲಿ ಕಳೆದ 45 ವರ್ಷಗಳಿಂದ ತನ್ನ ಪ್ರಾಮಾಣಿಕ ಮತ್ತು ಯಶಸ್ವಿ ಉದ್ಯಮದ ಮೂಲಕ ಲಕ್ಷಾಂತರ ಜನರ ನಂಬಿಕೆಯನ್ನು ಗಳಿಸಿದೆ. ಈ ಸುದೀರ್ಘ ಯಶಸ್ವಿ ಹಾದಿಯ ಸವಿನೆನಪಿಗಾಗಿ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳ ಗೊಂಡ, ನಾಡಿನ ಜನತೆಗೆ ಯೋಗ್ಯವಾದ ನಾಲ್ಕು ಭವ್ಯ ಸಭಾಭವನಗಳನ್ನು ಏಕಕಾಲದಲ್ಲಿ ಲೋಕಾರ್ಪಣೆ ಮಾಡುತ್ತಿದೆ.

ಈ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವದ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಂಧ್ರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಜ। ಎಸ್. ಅಬ್ದುಲ್ ನಜೀರ್ ಅವರು ಆಗಮಿಸಿ, ನಾಲ್ಕೂ ಸಭಾಂಗಣಗಳನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ. ಈ ನಾಲ್ಕು ಅದ್ದೂರಿ ಪಾಲೆಮಾರ್ ಸಭಾಂಗಣಗಳ ಮಹಾ ಲೋಕಾರ್ಪಣಾ ಸಮಾರಂಭವು ಮೇ23ರಂದು ಅತ್ಯಂತ ವೈಭವದಿಂದ ಜರುಗಲಿದೆ. ಅಂದು ಬೆಳಿಗ್ಗೆ 10ಗಂಟೆಗೆ ಮಂಗಳೂರಿನ ಮೇರಿಹಿಲ್‌ನ ಲ್ಲಿರುವ ಪಾಲೆಮಾರ್ ಕನ್ವೆನ್ಸನ್ ಸೆಂಟರ್ ನಲ್ಲಿ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ, ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಹಲವಾರು ರಾಜಕೀಯ, ಸಾಮಾಜಿಕ, ಧಾರ್ಮಿಕ ಸದಸ್ಯರಾದ ಐವನ್ ಡಿಸೋಜ ಸೇರಿದಂತೆ ಕರಾವಳಿ ಮತ್ತು ರಾಜ್ಯ ಮಟ್ಟದ ಹಲವ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕೃಷ್ಣಾಜೆ ಪಾಲೆಮಾರ್ ತಿಳಿಸಿದ್ದಾರೆ.













