ಮಂಗಳೂರು:ಪಚ್ಚನಾಡಿಯ ತ್ಯಾಜ್ಯದ ರಾಶಿಗೆ ಬೆಂಕಿ; ನಂದಿಸಲು ಹರ ಸಾಹಸ

Spread the love

ಮಂಗಳೂರು:ಪಚ್ಚನಾಡಿಯ ತ್ಯಾಜ್ಯದ ರಾಶಿಗೆ ಬೆಂಕಿ; ನಂದಿಸಲು ಹರ ಸಾಹಸ
 

ಮಂಗಳೂರು: ನಗರದ ಪಚ್ಚನಾಡಿಯಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆಗೆ ತ್ಯಾಜ್ಯದ ರಾಶಿಗೆ ಬೆಂಕಿ ಆವರಿಸಿಕೊಂಡಿದೆ.

ಶಾಸಕ ಡಾ. ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಶಮನ ಮಾಡುವ ಕುರಿತಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಈ ಸಂದರ್ಭ ಜಿಲ್ಲಾಧಿಕಾರಿಗೆ ಕರೆ ಮಾಡಿ ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಹಾಗೂ ಮಂಗಳೂರು ವಿಮಾನ ನಿಲ್ದಾಣದಿಂದ ಅತ್ಯಾಧುನಿಕ ಅಗ್ನಿಶಾಮಕ ವಾಹನ ಹಾಗೂ ಸಿಬಂದಿಗಳನ್ನು ಕಳುಹಿಸುವಂತೆ ಮನವಿ ಮಾಡಿದರು.

ಮಾಧ್ಯಮದೊಂದಿಗೆ ಮಾತನಾಡಿ, ಇಲ್ಲಿನ ತ್ಯಾಜ್ಯ ರಾಶಿಗೆ ಆವರಿಸಿದ ಬೆಂಕಿಯನ್ನು ನಂದಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಸಿಬಂದಿಗಳು ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದಷ್ಟು ಶೀಘ್ರವಾಗಿ ಬೆಂಕಿ ನಂದಿಸಲು ಸತತ ಪ್ರಯತ್ನ ನಡೆಯುತ್ತಿದೆ ಎಂದರು.


Spread the love