ಮಂಗಳೂರು:ಪಿಯುಸಿಎಲ್ ಜಿಲ್ಲಾಧ್ಯಕ್ಷರ ನಿಗೂಢ ಸಾವು: ನ್ಯಾಯಾಂಗ ತನಿಖೆಗೆ ಆಗ್ರಹ

Spread the love

ಮಂಗಳೂರು: ಪಿಯುಸಿಎಲ್ ದ.ಕ.ಜಿಲ್ಲಾಧ್ಯಕ್ಷ ಡೇವಿಡ್ ಡಿಸೋಜರ ನಿಗೂಢ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪಿಯುಸಿಎಲ್ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.

1-PUCL_david_dsouza_case

ಸೋಮವಾರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ಪಿಯುಸಿಎಲ್ ರಾಷ್ಟ್ರೀಯ ಉಪಾಧ್ಯಕ್ಷ ಪಿ.ಬಿ.ಡೇಸಾ ನೇತೃತ್ವದ ನಿಯೋಗ, ಜು.3ರಂದು ಸಂಜೆ 4ಕ್ಕೆ ಮಂಗಳೂರು ಗ್ರಾಮಾಂತರ ಠಾಣೆಗೆ ತೆರಳಿದ್ದ ಡೇವಿಡ್ ಡಿಸೋಜ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಸಾವಿನ ಸಂಶಯವಿದ್ದು, ಪ್ರಕರಣದ ನ್ಯಾಯಾಂಗ ತನಿಖೆಯ ಜತೆಗೆ ಎನ್‌ಸಿಎಚ್‌ಆರ್‌ಗೆ ಸೂಕ್ತ ಮಾಹಿತಿ ನೀಡಬೇಕು. ಪ್ರತ್ಯಕ್ಷ ಸಾಕ್ಷಿಗೆ ಪೊಲೀಸರಿಂದ ರಕ್ಷಣೆ ನೀಡಬೇಕು ಮತ್ತು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿದೆ.


Spread the love