ಮಂಗಳೂರು:ಮನೆಯಿಂದ ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ

Spread the love

ಮಂಗಳೂರು:ಮನೆಯಿಂದ ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ

ಮಂಗಳೂರು:  ಪಚ್ಚನಾಡಿ ಗ್ರಾಮದ ಭಟ್ರಕೋಡಿ ಬಾಡಿಗೆ ಮನೆಯಲ್ಲಿ   ವಾಸವಿದ್ದ ಪಲ್ಲವಿ (21 ವರ್ಷ) ಎಂಬವರು ನಗರದ ಫಳ್ನೀರ್ ಎಂಬಲ್ಲಿ ಕಾಲ್ ಸೆಂಟರ್‍ನಲ್ಲಿ ಕೆಲಸ ಮಾಡಿಕೊಂಡಿದ್ದರು.  ಮೇ 10 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೇ ಇದ್ದು, ಕಾಣೆಯಾದ ಪ್ರಕರಣ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

ಕಾಣೆಯಾದವರ ಚಹರೆ : ಎತ್ತರ 5.3 ಅಡಿ, ಗೋಧಿ ಮೈಬಣ್ಣ, ದುಂಡು ಮುಖ, ಕಪ್ಪು ಕೂದಲು, ಸಾಧಾರಣ ಶರೀರ ಹೊಂದಿರುತ್ತಾರೆ. ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.
ಕಾಣೆಯಾದ ದಿನ ಧರಿಸಿದ ಗುಲಾಬಿ ಬಣ್ಣದ ಟಾಪ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments