ಮಂಗಳೂರು: ಅಕ್ರಮ ಮರಳು ಸಾಗಾಟದ ಲಾರಿ ವಶ

Spread the love

ಮಂಗಳೂರು: ಅಕ್ರಮ ಮರಳು ಸಾಗಾಟದ ಲಾರಿ ವಶ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ಕಂಕನಾಡಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಶುಕ್ರವಾರದಂದು ಪಡೀಲು ಜಂಕ್ಷನ್ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ KA-46-3202 ಲಾರಿಯನ್ನು ಪರಿಶೀಲಿಸಲಾಗಿ ಸದರಿ ಲಾರಿಯುಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿರುತ್ತದೆ ಸದ್ರಿ ವಾಹನ ಮತ್ತು ಮರಳನ್ನು ಮುಂದಿನ ಕ್ರಮದ ಬಗ್ಗೆ ಸ್ವಾಧೀನಡಿಸಿಕೊಂಡಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ರೂಪಾಯಿ ಹತ್ತು ಲಕ್ಷ ರೂಪಾಯಿಗಳು ಆಗಿರುತ್ತದೆ.

ಈ ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರಾಮರಾವ್ ರವರ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಅಶೋಕ ಪಿ ರವರ ನೇತ್ರತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ಪ್ರದೀಪ್ ಟಿ.ಆರ್ ಮತ್ತು ಠಾಣಾ ಸಿಬ್ಬಂದಿಯವರು ನಡೆಸಿರುತ್ತಾರೆ…


Spread the love