ಮಂಗಳೂರು: ಅತೀ ವೇಗದ ಬೈಕ್ ಡಿಕ್ಕಿಗೆ ಕಂಬವೇ ಎರಡು ತುಂಡು
ಮಂಗಳೂರಿನ ಉಳ್ಳಾಲದ ಕಿನ್ಯಾ ಸಂಕೇಶದಲ್ಲಿ ಅತಿವೇಗದ ಚಾಲನೆಯ ಅಪಾಯಕಾರಿ ದೃಶ್ಯವೊಂದು ಸೆರೆಯಾಗಿದೆ. ವೇಗವಾಗಿ ಬಂದ ಬೈಕ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದರು. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸೋಮವಾರ ಸಂಜೆ 5:00 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕಾಂಕ್ರೀಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಂಬ ಅರ್ಧ ಮುರಿದು ರಸ್ತೆಗೆ ಬಿದ್ದಿದೆ. ಅಪಘಾತದ ತೀವ್ರತೆಯನ್ನು ನೋಡಿದವರು ದಿಗ್ಭ್ರಮೆಗೊಂಡಿದ್ದು, ಹತ್ತಿರದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ.
ವಿಜಯಪುರದ ವಿದ್ಯಾರ್ಥಿಗಳು ಎಂದು ಗುರುತಿಸಲಾದ ಇಬ್ಬರೂ ಸವಾರರು ಡಿಕ್ಕಿ ಹೊಡೆದ ಸ್ಥಳದಿಂದ ಹಲವಾರು ಮೀಟರ್ ದೂರದಲ್ಲಿ ಎಸೆಯಲ್ಪಟ್ಟರು. ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದರು.
