
ಮಂಗಳೂರು: ಅನಧಿಕೃತ ಮರಳು ಸಾಗಾಣಿಕೆಯಾದರೆ ದೂರು ನೀಡಿ
ಮಂಗಳೂರು: ಮಹಾನಗರ ಪಾಲಿಕೆ ಹಾಗೂ ಸಿಆರ್ಝಡ್ (ಅಖZ) ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದಂತಹ ವ್ಯಕ್ತಿಗಳನ್ನು ಬಳಸಿಕೊಂಡು ಅನಧಿಕೃತವಾಗಿ ನದಿಯಿಂದ ಮರಳನ್ನು ತೆಗೆದು ರಾತ್ರಿ ವೇಳೆಯಲ್ಲಿ ಸಾಗಾಣಿಕೆ ಮಾಡುತ್ತಿರುವ ದೂರುಗಳು ಬಂದಿರುತ್ತವೆ.
ಈ ಬಗ್ಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಅನಧಿಕೃತ ಮರಳು ಚಟುವಟಿಕೆಗಳು ನಡೆಯದಂತೆ ಪ್ರತಿ ನಿತ್ಯ ಗಸ್ತು ಕಾರ್ಯ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಲುವಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಲು ನಿರ್ಣಯಿಸಲಾಗಿತ್ತು.
ಇದೀಗ ತಂಡಗಳನ್ನು ರಚಿಸಲಾಗಿದ್ದು, ಇನ್ನು ಮುಂದೆ ಪಾಲಿಕೆ ಹಾಗೂ ಸಿಆರ್ಝಡ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮರಳು ತೆಗೆಯುವುದು, ಸಾಗಾಣಿಕೆ, ದಾಸ್ತಾನು ಮಾಡುವುದು ಕಂಡು ಬಂದಲ್ಲಿ ಸಾರ್ವಜನಿಕರು ಮೊಬೈಲ್ ನಂಬರ್: 9141036341ಗೆ ದೂರು ನೀಡಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಕಟಣೆ ತಿಳಿಸಿದೆ.