ಮಂಗಳೂರು: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನ; ತಾಯಿ, ಮಗಳು ಮೃತ್ಯು

Spread the love

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನ; ತಾಯಿ, ಮಗಳು ಮೃತ್ಯು

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಗರದಲ್ಲಿ ನಡೆದಿದ್ದು, ತಾಯಿ ಮತ್ತು ಒಬ್ಬ ಮಗಳು ಮೃತಪಟ್ಟರೆ, ಇನ್ನೋರ್ವ ಮಗಳು ಅಪಾಯದಿಂದ ಪಾರಾಗಿದ್ದಾಳೆ.
ಕೋಡಿಯಾಲ್ ಗುತ್ತುವಿನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ವಿಜಯಾ (33) ಮತ್ತವರ ಮಗಳು ಶೋಭಿಯಾ (4) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ತಾಯಿ ವಿಜಯ ಜತೆ ಇಬ್ಬರು ಹೆಣ್ಣು ಮಕ್ಕಳು ವಾಸಿಸುತ್ತಿದ್ದು, ಮೂವರು ಸಾಮೂಹಿಕವಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಪೈಕಿ ಇಬ್ಬರು ಮೃತಪಟ್ಟರೆ, ಇನ್ನೊರ್ವ ಮಗಳು ಅದೃಷ್ಟವಶಾತ್ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.


Spread the love

Leave a Reply

Please enter your comment!
Please enter your name here