ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪ; ಇಬ್ಬರ ಬಂಧನ

Spread the love

ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪ; ಇಬ್ಬರ ಬಂಧನ
 

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ಕೆಸಿ ರೋಡ್ ಬಳಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಆರೋಪಿಗಳನ್ನು ಮಂಜೇಶ್ವರ ಸಮೀಪದ ಹೊಸಬೆಟ್ಟು ಎಂಬಲ್ಲಿನ ಮುಸ್ತಫಾ (37) ಮತ್ತು ಮೂಲತಃ ಕುಂಜತ್ತೂರಿನ ಪ್ರಸ್ತುತ ಕೋಟೆಕಾರ್ ಬೀರಿ ಬಳಿ ವಾಸವಾಗಿರುವ ಶಂಶುದ್ದೀನ್ ಎ.(38) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳಿಂದ 95,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.


Spread the love

Leave a Reply