Home Mangalorean News Kannada News ಮಂಗಳೂರು: ಎಂ.ಡಿ.ಎಂ.ಎ ಮಾದಕ ವಸ್ತು ಮಾರಾಟ – ಆರೋಪಿಯ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ

ಮಂಗಳೂರು: ಎಂ.ಡಿ.ಎಂ.ಎ ಮಾದಕ ವಸ್ತು ಮಾರಾಟ – ಆರೋಪಿಯ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ

Spread the love

ಮಂಗಳೂರು: ಎಂ.ಡಿ.ಎಂ.ಎ ಮಾದಕ ವಸ್ತು ಮಾರಾಟ – ಆರೋಪಿಯ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ

ಮಂಗಳೂರು, ಮಾರ್ಚ್ 22: ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ದಿನಾಂಕ 22/03/2026 ರಂದು ಕೊಣಾಜೆ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು, ಉಳ್ಳಾಲ ತಾಲೂಕು ಬೆಳ್ಳ ಗ್ರಾಮದ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರಿನ ಫೀಜಾ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ದಾಳಿ ನಡೆಸಿದರು. ಮಂಗಳೂರು ತಾಲೂಕು ಕಸಬ ಬೆಂಗ್ರೆ ನಿವಾಸಿಯಾದ ಮೊಹಮ್ಮದ್ ಝಾಕೀರ್ ಎಂಬಾತನು ಎಂ.ಡಿ.ಎಂ.ಎ ಮಾದಕ ವಸ್ತುವನ್ನು ತನ್ನ ಗಿರಾಕಿಗಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು.

ದಾಳಿಯ ವೇಳೆ ಆರೋಪಿಯನ್ನು ವಶಕ್ಕೆ ಪಡೆದು, ಆತನಿಂದ ಒಟ್ಟು ₹1,06,000 ಮೌಲ್ಯದ 10.6 ಗ್ರಾಂ ತೂಕದ ನಿಷೇಧಿತ ಎಂ.ಡಿ.ಎಂ.ಎ ಮಾದಕ ವಸ್ತು, ಒಂದು ಸ್ಯಾಮ್‌ಸಂಗ್ ಮೊಬೈಲ್ ಫೋನ್, ತೂಕಮಾಪನ ಯಂತ್ರ, ಸ್ಟೋಕ್ ಟ್ಯೂಬ್, ಸಿರಿಂಜ್, ಸಿಗರ್ ಲೈಟ್ ಹಾಗೂ ನಂಬರ್ ಪ್ಲೇಟ್ ಇಲ್ಲದ ಹೀರೋ ಹೋಂಡಾ ಸ್ಪೆಂಡರ್ ಪ್ಲಸ್ ಹೊಸ ಬೈಕ್ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 25/2026 ಪ್ರಕರಣ ದಾಖಲಾಗಿದ್ದು, ಎನ್.ಡಿ.ಪಿ.ಎಸ್ ಕಾಯ್ದೆ 1985 ರ ಕಲಂ 8(c), 22, 22(a), 22(b), 22(c) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.


Spread the love

Exit mobile version