
ಮಂಗಳೂರು: ಕಾಂಗ್ರೆಸ್‌ನ ‘ಪ್ರಜಾಧ್ವನಿ’ ಕಾರ್ಯಕ್ರಮಕ್ಕೆ ಉಸ್ತುವಾರಿಗಳ ನೇಮಕ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮದ ಯಶಸ್ವಿಗೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್‌ರ ಶಿಫಾರಸ್ಸಿನ ಮೇರೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಪ್ರಜಾಧ್ವನಿ ಕಾರ್ಯಕ್ರಮದ ಕರಾವಳಿ ಕರ್ನಾಟಕದ ಸಂಚಾಲಕ ಬಿ.ಕೆ ಹರಿಪ್ರಸಾದ್‌ರ ಅನುಮತಿಯೊಂದಿಗೆ ಮಾಜಿ ಸಚಿವ ಅಭಯಚಂದ್ರ ಜೈನ್ ಅವರನ್ನು ಜಿಲ್ಲಾ ಸಂಯೋಜಕರನ್ನಾಗಿ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಅವರನ್ನು ಸಹ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಶಾಸಕ ಜೆ.ಆರ್. ಲೋಬೋ, ಬೆಳ್ತಂಗಡಿ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬಂಟ್ವಾಳ ಕ್ಷೇತ್ರದ ಉಸ್ತುವಾರಿಯಾಗಿ ರಾಜ್ಯಸಭೆಯ ಮಾಜಿ ಸದಸ್ಯ ಬಿ.ಇಬ್ರಾಹೀಂ, ಮೂಡುಬಿದಿರೆ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಮೇಯರ್ ಮಹಾಬಲ ಮಾರ್ಲ, ಮಂಗಳೂರು ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಮೇಯರ್ ಕವಿತಾ ಸನಿಲ್, ಮಂಗಳೂರು ದಕ್ಷಿಣ ಕ್ಷೇತ್ರದ ಉಸ್ತುವಾರಿಯಾ ಮಾಜಿ ಶಾಸಕ ಮೊಯ್ದಿನ್ ಬಾವ, ಮಂಗಳೂರು ಉತ್ತರ ಕ್ಷೇತ್ರದ ಉಸ್ತುವಾರಿಯಾಗಿ ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರನ್ನು ನೇಮಕಗೊಳಿಸಲಾಗಿದೆ.