ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಇಬ್ಬರು ಆಸ್ಪತ್ರೆಗೆ ದಾಖಲು

Spread the love

ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಇಬ್ಬರು ಆಸ್ಪತ್ರೆಗೆ ದಾಖಲು
ಮಂಗಳೂರು: ಇಲ್ಲಿನ ಕಾರಾಗೃಹದಲ್ಲಿ ಖೈದಿಗಳು ಗುಂಪಾಗಿ ಪ್ರತಿಸ್ಪರ್ಧಿ ಗ್ಯಾಂಗ್ ನ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ ಇಬ್ಬರು ವಿಚಾರಣಾಧೀನ ಖೈದಿಗಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿಗೊಳಗಾಗಿ ಗಾಯಗೊಂಡವರು ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಮತ್ತು ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ ಅಲಿಯಾಸ್ ಬೋಳಿಯಾರ್ ಮನ್ಸೂರ್ (30) ಎನ್ನುವವರಾಗಿದ್ದಾರೆ.
ಇಬ್ಬರೂ ವೆನ್ಹಾಕ್ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದು,ಪ್ರಾಣಾಪಾಯದಿಂದ ಚಿಕಿತ್ಸೆ ಪಾರಾಗಿದ್ದಾರೆ., ಇಬ್ಬರ ತಲೆ, ಭುಜ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಅಡುಗೆ ಮನೆಯಲ್ಲಿದ್ದ ಚೂಪಾದ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments