ಮಂಗಳೂರು: ಕಾರ್ಮಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಲು ಜಿಲ್ಲಾಧಿಕಾರಿ ಸೂಚನೆ 

Spread the love

ಮಂಗಳೂರು: ಕಾರ್ಮಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಲು ಜಿಲ್ಲಾಧಿಕಾರಿ ಸೂಚನೆ 

ಮಂಗಳೂರು: ಇದೀಗ ಬೇಸಿಗೆ ಪ್ರಾರಂಭವಾಗಿದ್ದು, ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಕಾರ್ಮಿಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ.

ಈ ದಿಸೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆ ಬಗ್ಗೆ ಅಗತ್ಯ ಸೌಲಭ್ಯ, ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ, ಶುದ್ಧ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಎಲ್ಲಾ ಉದ್ಯೋಗದಾತರ, ಗುತ್ತಿಗೆದಾರರ ಹಾಗೂ ನಿಯೋಜಕರ ಆದ್ಯ ಕರ್ತವ್ಯವಾಗಿದೆ. ವಿಶೇಷವಾಗಿ ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿರುವ ಎಲ್ಲಾ ವಿವಿಧ ಕಾರ್ಮಿಕರು, ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ಹೋಟೆಲ್ ಸಂಬಂಧಿತ ಸಂಸ್ಥೆಗಳಲ್ಲಿನ ಕಾರ್ಮಿಕರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಕಾರ್ಮಿಕರಿಗೆ ಈ ಕೆಳಕಂಡ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ.

1 ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆಯ ಬಗ್ಗೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಕೈಗೊಳ್ಳುವುದು ಮತ್ತು ಕಾರ್ಮಿಕರಿಗೆ ಅಗತ್ಯವಿರುವ ಸುರಕ್ಷತಾ ಸಾಮಾಗ್ರಿಗಳನ್ನು ತಪ್ಪದೇ ಒದಗಿಸುವುದು, (ಶೂಗಳು, ಹೆಲ್ಮೆಟ್, ಗ್ಲೌಸ್ ಇತ್ಯಾದಿ)

2. ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ಅಗತ್ಯ ಸಂದರ್ಭದಲ್ಲಿ ಆರೋಗ್ಯ ತಪಾಸಣಾ ವ್ಯವಸ್ಥೆಯನ್ನು ಕೈಗೊಳ್ಳುವುದು. ಕೆಲಸದ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಕಡ್ಡಾಯವಾಗಿ ವ್ಯವಸ್ಥೆಗೊಳಿಸುವುದು.

3. ಕಾರ್ಮಿಕರಿಗೆ ಶುದ್ಧ ಕುಡಿಯುವ ನೀರು ಮತ್ತು ಆಹಾರ ಸೌಲಭ್ಯವನ್ನು ವ್ಯವಸ್ಥೆಗೊಳಿಸುವುದು.

4. ಬಿಸಿಲಿನಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಅಗತ್ಯ ನೆರಳಿನ ಸೌಲಭ್ಯ ಕಲ್ಪಸುವುದು.

5. ವಯಸ್ಸಾದ ಹಿರಿಯ ಕಾರ್ಮಿಕರಿಗೆ ಮತ್ತು ಮಹಿಳಾ ಕಾರ್ಮಿಕರಿಗೆ ವಿಶೇಷವಾಗಿ ಗರ್ಭೀಣಿಯರಿಗೆ/ ಬಾಣಂತಿಯರಿಗೆ ಅಗತ್ಯ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವುದು.

6. ಕಾರ್ಮಿಕದ ಚಿಕ್ಕ ಮಕ್ಕಳಿಗೆ ಕೆಲಸದ ಸ್ಥಳದಲ್ಲಿ ಅಗತ್ಯ ಶಿಶುಪಾಲನಾ (ಅಡಿeಛಿhe) ವ್ಯವಸ್ಥೆ ಕೈಗೊಳ್ಳುವುದು,

7. ಅಂತರ ಜಿಲ್ಲೆ ಮತ್ತು ಅಂತರ ರಾಜ್ಯಗಳಿಂದ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ಕಾರ್ಮಿಕರಿಗೆ ನಿರ್ಮಾಣ ಕಾಮಗಾರಿಗಳ ಮಾಲಕರು, ಗುತ್ತಿಗೆದಾರರು/ ನಿರ್ವಾಹಕರು ಕಲ್ಪಿಸಿರುವ ತಾತ್ಕಾಲಿಕ ಕಾರ್ಮಿಕರ ಶೆಡ್‍ಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ದೊರೆಯುವಂತೆ ಕ್ರಮವಹಿಸುವುದು, (ಕುಡಿಯುವ ನೀರು, ಶೌಚಾಲಯ, ವಸತಿ)

8. ಕಾರ್ಮಿಕರಿಗೆ ವಿವಿಧ ಕಾರ್ಮಿಕ ಕಾಯ್ದೆಗಳನ್ವಯ ದೊರೆಯಬೇಕಾದ ಕನಿಷ್ಠವೇತನ, ಸಕಾಲದಲ್ಲಿ ವೇತನ ಪಾವತಿ, ಶಾಸನಬದ್ಧ ಕಟಾವಣೆಗಳಾದ (ಇSI, Pಈ) ಹಾಗೂ ಇತರ ಸೌಲಭ್ಯಗಳನ್ನು ತಪ್ಪದೇ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಗಳನ್ವಯ ನೀಡಬೇಕು.

ಈ ಎಲ್ಲ ಸೌಲಭ್ಯಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾರ್ಮಿಕರಿಗೆ ದೊರೆಯುವಂತೆ ಕ್ರಮವಹಿಸಲು ಸಂಬಂಧಿಸಿದವರಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ.


Spread the love

Leave a Reply

Please enter your comment!
Please enter your name here