Home Mangalorean News Kannada News ಮಂಗಳೂರು: ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ

ಮಂಗಳೂರು: ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ

Spread the love

ಮಂಗಳೂರು: ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ

ಮಂಗಳೂರು:  ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು, ಸೆಪ್ಟೆಂಬರ್ 1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರ ಚಹರೆ:- ಎತ್ತರ ಸುಮಾರು 5.3 ಅಡಿ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಕಪ್ಪು ಕೂದಲು ಹೊಂದಿರುತ್ತಾರೆ. ಕನ್ನಡ, ತುಳು, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಬ್ಲೂ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಲೇಜು ಸಮವಸ್ತ್ರ ಪ್ಯಾಂಟ್ ಧರಿಸಿದ್ದರು.

ಕಾಣೆಯಾದವರ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version