
Spread the love
ಮಂಗಳೂರು: ಖಾಸಗಿ ವೈದ್ಯಕೀಯ ಕಾಲೇಜೊಂದರ ಡೀನ್ ನಾಪತ್ತೆ
ಮಂಗಳೂರು: ಖಾಸಗಿ ವೈದ್ಯಕೀಯ ಕಾಲೇಜೊಂದರ ಡೀನ್ ಓರ್ವರು ನಾಪತ್ತೆಯಾದ ಘಟನೆ ಭಾನುವಾರ ಸಂಜೆ ನಡೆದಿದೆ.
ನಾಪತ್ತೆಯಾದವರು ನಗರದ ಖಾಸಗಿ ವೈದ್ಯಕೀಯ ಕಾಲೇಜೊಂದರ ಡೀನ್ ಡಾ. ಉರ್ಬಾನ್ ಎಂದು ತಿಳಿದು ಬಂದಿದೆ.
ಭಾನುವಾರ ಸಂಜೆ ಡಾ. ಉರ್ಬಾನ್ ಅವರು ತನ್ನ ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ತೆರಳುವುದಾಗಿ ತನ್ನ ಪತ್ನಿಯಲ್ಲಿ ತಿಳಿಸಿ ಹೋಗಿದ್ದರು ಆದರೆ ರಾತ್ರಿಯಾದ ಮನೆಗೆ ವಾಪಾಸಾಗಿರಲಿಲ್ಲ.
ಮನೆಯವರು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರಾದರೂ ಅವರ ಮೊಬೈಲ್ ಸ್ವಿಚ್ಚ್ ಆಫ್ ಆಗಿದ್ದು ಬಳಿಕ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ಕುರಿತು ದೂರು ದಾಖಲಿಸಿದ್ದಾರೆ.
ಪಾಂಡೇಶ್ವರ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
Spread the love