ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ 

Spread the love

ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ 

ಮಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದರು.

ಅವರು ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವದ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನವರಿ 26ರಂದು ನಗರದ ನೆಹರು ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರೆವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಪಾಲಿಸಬೇಕು ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು, ಗಣ್ಯರನ್ನು ಆಹ್ವಾನಿಸಬೇಕು ಎಂದರು.

ಕೋರೊನ ಸಾಂಕ್ರಾಮಿಕ ರೋಗದ ಹಿನ್ನೆಲೆ ಈ ಬಾರಿ ಶಾಲಾ ಮಕ್ಕಳಿಂದ ಯಾವುದೇ ಪಥ ಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ ಪೊಲೀಸ್, ಗೃಹರಕ್ಷಕ ದಳದವರಿಂದ ಪಥಸಂಚಲನ ನಡೆಯಲಿದೆ ಎಂದು ಅವರು ಸರ್ವತ್ತೋಮ ಪ್ರಶಸ್ತಿಗೆ ಆಯ್ಕೆಯಾದವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ಅವರು ಉಪ ಸಮಿತಿಗಳಿಗೆ ನಿಗಧಿಪಡಿಸಿರುವ ಜವಾಬ್ದಾರಿಯನ್ನು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಮ್ ಜೆ ರೂಪಾ ಜಿಲ್ಲಾ ಪೋಲೀಸ್ ಅಧೀಕ್ಷಕ ಲಕ್ಮೀಪ್ರಸಾದ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥತರಿದ್ದರು.


Spread the love