ಮಂಗಳೂರು: ಗಾಂಜಾ ಮಾರಾಟ ಪ್ರಕರಣ: ಮತ್ತೆ ಪ್ರತಿಷ್ಠಿತ ಕಾಲೇಜಿನ ಮೂವರ ಬಂಧನ

Spread the love

ಮಂಗಳೂರು: ಗಾಂಜಾ ಮಾರಾಟ ಪ್ರಕರಣ: ಮತ್ತೆ ಪ್ರತಿಷ್ಠಿತ ಕಾಲೇಜಿನ ಮೂವರ ಬಂಧನ

ಮಂಗಳೂರು: ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಪೆಥೊಲೊಜಿ ಎಮ್ ಡಿ ಮಾಡುತ್ತಿರುವ ತುಮಕೂರು ಮೂಲದ ಡಾ.ಹರ್ಷ ಕುಮಾರ್, ಡಿ ಫಾರ್ಮಾ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ ನಿವಾಸಿ, ಹಣ್ಣುಹಂಪಲು ಮಾರಾಟ ಅಂಗಡಿಯಲ್ಲಿ ಕೆಲಸ ಮಾಡುವ ಮುಹಮ್ಮದ್ ಅಫ್ರಾರ್(23 ಎಂದು ಗುರುತಿಸಲಾಗಿದೆ.

ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ಪೊಲೀಸರು  10 ಮಂದಿಯನ್ನು ಈಗಾಗಲೇ ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಓರ್ವ ಯು.ಕೆ. ಮೂಲದ ಸಾಗರೋತ್ತರ ಭಾರತೀಯ ಪ್ರಜೆಯಾಗಿದ್ದಾನೆ. ಈ ಬಗ್ಗೆ ತನಿಖೆ ಮುಂದುವರಿಸಿರುವ ಪೊಲೀಸರು ಮತ್ತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

Leave a Reply

Please enter your comment!
Please enter your name here