ಮಂಗಳೂರು ಗೋಲಿಬಾರ್ ಪ್ರಕರಣ: ಫೆ.13ರಂದು ವೀಡಿಯೊ ಸಾಕ್ಷಿಗಳನ್ನು ಹಾಜರುಪಡಿಸಲು  ಸೂಚನೆ

Spread the love

ಮಂಗಳೂರು ಗೋಲಿಬಾರ್ ಪ್ರಕರಣ: ಫೆ.13ರಂದು ವೀಡಿಯೊ ಸಾಕ್ಷಿಗಳನ್ನು ಹಾಜರುಪಡಿಸಲು  ಸೂಚನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸೆಂಬರ್ 19 ರಂದು ನಡೆದ ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲೆ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಇವರನ್ನು ನೇಮಿಸಿ ಆದೇಶಿಸಲಾಗಿದೆ.

ಈ ಸಂಬಂಧ ಡಿಸೆಂಬರ್ 19 ರಂದು ನಡೆದ ಘಟನೆ ಬಗ್ಗೆ ಯಾವುದೇ ಸಾರ್ವಜನಿಕರು ಪತ್ರಿಕಾ/ವಾರ್ತಾ ಮಾಧ್ಯಮದ ಬಳಿ ವೀಡಿಯೋ ತುಣುಕುಗಳು ಇದ್ದಲ್ಲಿ ಅಂತಹವರು ಅದನ್ನು ಫೆಬ್ರವರಿ 13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿವಿಧಾನ ಸೌಧ, ಮಂಗಳೂರು ಇಲ್ಲಿ ನಡೆಯುವ ವಿಚಾರಣೆ ಸಂದರ್ಭದಲ್ಲಿ ಹಾಜರುಪಡಿಸುವಂತೆ ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love