ಮಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ – ಅದೃಷ್ಟವಶಾತ್‌ ಪಾರಾದ ಮಹಿಳೆ

Spread the love

ಮಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ – ಅದೃಷ್ಟವಶಾತ್‌ ಪಾರಾದ ಮಹಿಳೆ

ಮಂಗಳೂರು: ಕಾರಿನಲ್ಲಿ ಬೆಂಕಿ ಅನಾಹುತ ಸಂಭವಿಸಿದ ಘಟನೆ ಮಂಗಳವಾರ ರಾತ್ರಿ ನಗರದ ಶಕ್ತಿನಗರ ಬಳಿ ಸಂಭವಿಸಿದೆ.

ಮಾರುತಿ ಸ್ವಿಫ್ಟ್ ಕಾರು ಚಲಿಸುತ್ತಿದ್ದಾಗ ಎಂಜಿನ್ ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಮಹಿಳೆ ಕೂಡಲೇ ಕಾರನ್ನು ನಿಲ್ಲಿಸಿ ಎಂಜಿನ್ ಸ್ವಿಚ್ ಆಫ್ ಮಾಡಿ ಕಾರಿನಿಂದ ಇಳಿದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪುವ ಮುನ್ನವೇ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು.

ಶಾರ್ಟ್‌ ಸರ್ಕ್ಯೂಟ್‌ ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ


Spread the love