ಮಂಗಳೂರು: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

Spread the love

ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಎ.2). ಬೆಳಗ್ಗೆ ನಡೆದಿದೆ.

ಶ್ರೀಧ‌ರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯರಾಗಿದ್ದರು.’

ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ನಗರದ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.


Spread the love

Leave a Reply