ಮಂಗಳೂರು:  ಜುವೆಲರಿ ಶಾಪ್ ಶಿಬಂದಿಯನ್ನು ಇರಿದು ಕೊಲೆ

Spread the love

ಮಂಗಳೂರು:  ಜುವೆಲರಿ ಶಾಪ್ ಶಿಬಂದಿಯನ್ನು ಇರಿದು ಕೊಲೆ

ಮಂಗಳೂರು: ನಗರದ ಮಿಲಾಗ್ರಿಸ್ ಬಳಿಯ ಜುವೆಲರಿ ಅಂಗಡಿಯಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

ನಗರದ ಹಂಪನಕಟ್ಟೆ ಮಂಗಳೂರು ಜುವೆಲರಿ ಕೆಲಸಕ್ಕಿದ್ದ ಅತ್ತಾವರ ಮೂಲದ ರಾಘವ ಆಚಾರಿ ಎಂದು ಗುರುತಿಸಲಾಗಿದೆ.

ವ್ಯಕ್ತಿಯೊಬ್ಬ ಅಂಗಡಿಗೆ ಪ್ರವೇಶಿಸಿ ರಾಘವ ಆಚಾರಿಗೆ ಚೂರಿಯಿಂದ ಇರಿದಿದ್ದು, ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿ ಕ್ಯಾಮೆರಾದಲ್ಲಿ ಕೃತ್ಯ ದಾಖಲಾಗಿರುವ ಸಾಧ್ಯತೆಯಿದ್ದು, ಪರಿಶೀಲನೆ ನಡೆಯುತ್ತಿದೆ. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವುದು ಕಂಡು ಬಂದಿದೆ.

ಸ್ಥಳಕ್ಕೆ ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love