Home Mangalorean News Kannada News ಮಂಗಳೂರು:  ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ 

ಮಂಗಳೂರು:  ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ 

Spread the love

ಮಂಗಳೂರು:  ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ 

ಮಂಗಳೂರು:  ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು, ಯೋಗ ಸಂಘಟನೆಗಳು, ಸ್ಕೌಟ್ಸ್ & ಗೈಡ್ಸ್ ಸಂಘಟನೆಗಳ ಸಹಯೋಗದೊಂದಿಗೆ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಪುರಭವನದಲ್ಲಿ ಬೆಳಿಗ್ಗೆ 8 ಗಂಟೆಗೆ ಆಯೋಜಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉಪಸ್ಥಿತರಿರಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version