ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮನಿಂದನೆ ಪ್ರಕರಣ – ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

Spread the love

ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮನಿಂದನೆ ಪ್ರಕರಣ – ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

ಮಂಗಳೂರು: ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ನಿಂದನೆ ಆರೋಪದ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ಸರಕಾರ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಿಸಿದೆ. ಈ ಹಿನ್ನಲೆಯಲ್ಲಿ ಇಂದು ಅವರು ಕೊಟ್ಟಾರದಲ್ಲಿರುವ ದ.ಕ.ಜಿಲ್ಲಾ ಪಂಚಾಯತ್ ನ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಸಭೆಯ ಬಳಿಕ ಮಾತನಾಡಿದ ಆಕಾಶ್ ಶಂಕರ್, ಪ್ರಕರಣದ ಸತ್ಯಾಸತ್ಯತೆ ಅರಿಯಲು ಸಭೆ ನಡೆಸಿದ್ದೇನೆ. ಹಂತಹಂತವಾಗಿ ಅಧಿಕಾರಿಗಳೊಂದಿಗೆ ಈ ಬಗ್ಗೆ ಮಾಹಿತಿ ಪಡೆದು, ತನಿಖೆ ನಡೆಸಲಿದ್ದೇನೆ. ವಿಚಾರಣೆ ನಡೆಯುತ್ತಲೇ ಇದೆ. ಪ್ರಾಥಮಿಕ ಹಂತದಲ್ಲಿ ವಿಚಾರಣೆ ಕುರಿತಂತೆ ಏನೇ ವಿಚಾರವನ್ನು ಹೇಳಲಾಗುವುದಿಲ್ಲ. ಆದಷ್ಟು ಶೀಘ್ರದಲ್ಲಿ ಸರಕಾರಕ್ಕೆ ವರದಿಯನ್ನು ಸಲ್ಲಿಸಲಿದ್ದೇನೆ. ಪ್ರಾಮಾಣಿಕ ವಾಗಿ ಈ ತನಿಖೆ ನಡೆಸಲಿದ್ದೇನೆ ಎಂದು ಹೇಳಿದರು.


Spread the love