ಮಂಗಳೂರು:  ಡಿಸೆಂಬರ್ 1ರಂದು ವಿಶ್ವ ಏಡ್ಸ್ ದಿನ 

Spread the love

ಮಂಗಳೂರು:  ಡಿಸೆಂಬರ್ 1ರಂದು ವಿಶ್ವ ಏಡ್ಸ್ ದಿನ 

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪುತ್ತೂರು ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜು, ಯುವ ರೆಡ್ ಕ್ರಾಸ್ ಘಟಕ, ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜು ಪುತ್ತೂರು ಸ್ವಯಂಸೇವಾ ಸಂಘ ಸಂಸ್ಥೆಗಳು, ಎನ್.ಎಸ್.ಎಸ್. ಘಟಕಗಳು ಹಾಗೂ ರೆಡ್ ರಿಬ್ಬನ್ ಕ್ಲಬ್ ನ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನ-2022 ಜಿಲ್ಲಾ ಮಟ್ಟದ ಸಮಾರಂಭ ಡಿಸೆಂಬರ್ 1ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ನೆಹರು ನಗರದ ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸುವರು. ಪುತ್ತೂರು ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಗಣಪತಿ ಭಟ್ ಅಧ್ಯಕ್ಷತೆ ವಹಿಸುವರು.

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ., ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಹಾಗೂ ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ಜೆ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಪುತ್ತೂರು ಸ್ವಾಮಿ ವಿವೇಕಾನಂದ ಕಾಲೇಜಿನ ಯುವ ರೆಡ್ ಕ್ರಾಸ್ ಅಧಿಕಾರಿ ಡಾ. ಅರುಣ್ ಪ್ರಕಾಶ್ ಹಾಗೂ ಎನ್.ಎಸ್.ಎಸ್. ಅಧಿಕಾರಿ ವಿದ್ಯಾ ಕೆ.ಎಲ್. ಭಾಗವಹಿಸುವರು. ಮಂಗಳೂರು ವಿಭಾಗದ ಡಬ್ಲ್ಯೂ.ಎಚ್.ಓ ಕನ್ಸ್‍ಲ್‍ಟೆಂಟ್ ಡಾ. ಜೋಸ್ ಥೋಮಸ್ ಅವರು ಉಪನ್ಯಾಸ ನೀಡಲಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ಪುತ್ತೂರಿನ ಮಂಗಳ ಸ್ಟೋರ್ ಬಳಿಯಿಂದ ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜು ವರೆಗೆ ಜಾಥಾ ಕಾರ್ಯಕ್ರಮ ನಡೆಯಲಿದ್ದು, ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ಜೆ. ಜಾಥಾ ಕ್ಕೆ ಚಾಲನೆ ನೀಡುವರು.


Spread the love