ಮಂಗಳೂರು: ಡಿ.1ರಂದು ವಿಶ್ವ ಏಡ್ಸ್ ದಿನ

Spread the love

ಮಂಗಳೂರು: ಡಿ.1ರಂದು ವಿಶ್ವ ಏಡ್ಸ್ ದಿನ

ಮಂಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್‍ಎಸ್‍ಎಸ್ ಘಟಕಗಳ ರೆಡ್ ರಿಬ್ಬನ್ ಕ್ಲಬ್‍ಗಳು ಹಾಗೂ ಬಂಟ್ವಾಳ ಪರಿಸರದ ಹಲವು ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 1ರ ಬುಧವಾರ ಜಾಥಾ ಹಾಗೂ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಶ್ವ ಏಡ್ಸ್ ದಿನದ ಅಂಗವಾಗಿ ಅಂದು ಬೆಳಿಗ್ಗೆ 8 ಗಂಟೆಗೆ ಬಿ.ಸಿ.ರೋಡಿನ ಗುರು ನಾರಾಯಣ ವೃತ್ತದಿಂದ ಮೊಡಂಕಾಪು ಇನ್ಫ್ಯಾಂಟ್ ಜೀಸಸ್ ಚರ್ಚ್‍ವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ನಂತರ ಇನ್ಫ್ಯಾಂಟ್ ಜೀಸಸ್ ಚರ್ಚ್ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love