ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

Spread the love

ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಹಾಸನ ಚೆನ್ನರಾಯಪಟ್ಟಣದ ಶ್ರೀನಿವಾಸ ಸಿರಯಾನ್ (56) ಹಾಗೂ ಅರಕಲಗೂಡು ತಾಲೂಕು ದೊಡ್ಡಗಾವನಹಳ್ಳಿ ಗ್ರಾಮದ ಉಪೇಂದ್ರ ಡಿ.ಸಿ. ಯಾನೆ ಅಭಿಷೇಕ್ (38) ಬಂಧಿತ ಆರೋಪಿಗಳಾಗಿದ್ದಾರೆ.

ಶ್ರೀನಿವಾಸ ಸಿರಾಯನ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 6ನೇ ಜೆಎಂಎಫ್‌ಸಿ ನ್ಯಾಯಾಲಯವು ಹಲವು ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿದರೂ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.


Spread the love
Subscribe
Notify of

0 Comments