ಮಂಗಳೂರು-ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ನಾನ್ ಎಸಿ ಸ್ಲೀಪರ್ ಸಾರಿಗೆ ಆರಂಭ

ಮಂಗಳೂರು-ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ನಾನ್ ಎಸಿ ಸ್ಲೀಪರ್ ಸಾರಿಗೆ ಆರಂಭ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದ, ದಾವಣಗೆರೆ ಘಟಕದಿಂದ ನೂತನವಾಗಿ ಮಂಗಳೂರಿನಿಂದ ದಾವಣಗೆರೆಗೆ ಹೊಸ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ವಯಾ ಉಡುಪಿ, ಮಣಿಪಾಲ್, ಕುಂದಾಪುರ ಶಿವಮೊಗ್ಗ ಮಾರ್ಗವಾಗಿ ಸಂಚರಿಸಲಿದೆ.

    ನೂತನ ಸಾರಿಗೆಗಳ ಕಾರ್ಯಾಚರಣೆಯ ವಿವರ ಇಂತಿವೆ: ಮಂಗಳೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ದಾವಣಗೆರೆ ಬೆಳಿಗ್ಗೆ 7 ಗಂಟೆಗೆ ತಲುಪಲಿದೆ. ದಾವಣಗೆರೆಯಿಂದ ರಾತ್ರಿ 9.15 ಗಂಟೆಗೆ ಹೊರಟು ಬೆಳಿಗ್ಗೆ 6 ಗಂಟೆಗೆ ತಲುಪಲಿದೆ.  ಸಾರ್ವಜನಿಕರು ಸಾರಿಗೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು.    ನಾನ್ ಎಸಿ ಸ್ಲೀಪರ್ ಸಾರಿಗೆಯಲ್ಲಿ ಪ್ರತಿ ಪ್ರಯಾಣಿಕರಿಗೆ 450 ದರ ವಿಧಿಸಲಾಗುತ್ತದೆ. ಸಾರ್ವಜನಿಕರು ಪ್ರಯಾಣದ ಅನುಕೂಲವನ್ನು  ಪಡೆಯುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ, ಕರಾರಸಾಸಂ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.