ಮಂಗಳೂರು: ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ
ಮಂಗಳೂರು: ಮೈಸೂರು ವಿಶ್ವವಿದ್ಯಾನಿಲಯದ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನ. ಎಂ.ವಿ.ಎ. ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ 2 ವರ್ಷಗಳ 4 ಸೆಮಿಸ್ಟರ್ “ಸಿಬಿಸಿಎಸ್” ಪದ್ಧತಿಯ ಕೋರ್ಸ್ ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ , ಶಿಲ್ಪಕಲೆ, ಮತ್ತು ಅಚ್ಚುಕಲೆ, ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ದಿನ ಆಗಸ್ಟ್ 3 ಆಗಿರುತ್ತದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2438931 ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
