ಮಂಗಳೂರು: ನಂಬರ್ ಪ್ಲೇಟ್ ರಹಿತ 75 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ನಂಬರ್ ಪ್ಲೇಟ್ ರಹಿತ 75 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ನಗರದಲ್ಲಿ ನಂಬರ್ ಪ್ಲೇಟ್ ರಹಿತ ವಾಹನಗಳ ಪತ್ತೆಗೆ ವಿಶೇಷ ಕಾರ್ಯಾಚರಣೆಯನ್ನು ಪೊಲೀಸ್ ಇಲಾಖೆ ನಡೆಸುತ್ತಿದ್ದು ಇದುವರೆಗೆ 75 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾ

ಈ ಕುರಿತು ನಗರ ಪೊಲೀಸ್ ಕಮೀಷನರ್ ಡಾ|ಹರ್ಷ ಪಿ ಎಸ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದ ಸಾಕಷ್ಟು ವಾಹನಗಳು ಒಡಾಡುತ್ತಿದ್ದು ಇಂತಹ ವಾಹನಗಳನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ 75 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈ ಕಾರ್ಯಾಚರಣೆ ನಿರಂತರವಾಗಿ ಮುಂದುವರೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.