ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಅನೀರೀಕ್ಷಿತ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು

Spread the love

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಅನೀರೀಕ್ಷಿತ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅರ್ಜಿದಾರರಿಗೆ ನಿಯಮಬದ್ದವಾಗಿ ಮಾಹಿತಿ ನೀಡದ ದೂರಿನ ಅನ್ವಯ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಗಳೂರು ನಗರಾಭೀವೃದ್ಧಿ ಪ್ರಾಧಿಕಾರದಲ್ಲಿ ಅರ್ಜಿಗಳ ವಿಲೇವಾರಿಯಲ್ಲಿನ ವಿಳಂಬದ ಬಗ್ಗೆ ಮತ್ತು ಮಧ್ಯವರ್ತಿಗಳ ಹಾವಳಿಯ ಬಗ್ಗೆ ದೂರುಗಳು ಲಿಖಿತವಾಗಿ, ಮೌಖಿಕವಾಗಿ ಮತ್ತು ಗುಪ್ತ ಮಾಹಿತಿ ಯಿಂದ ಬಂದ ಹಿನ್ನಲೆಯಲ್ಲಿ ಸದರಿ ಕಛೇರಿಗೆ ಲೋಕಾಯುಕ್ತ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಅನಿರೀಕ್ಷಿತವಾಗಿ ದಿನಾಂಕ; 11.10.2022 ರಿಂದ ದಿನಾಂಕ 14.10.2022 ರವರೆಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದಾಗ ಕಡತಗಳ ವಿಲೇವಾರಿಯಲ್ಲಿ ಹಲವಾರು ನ್ಯೂನ್ಯತೆಗಳು ಕಂಡು ಬಂದಿದ್ದು, ವಿಲೇವಾರಿಗೆ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತಿದ್ದು, ಅರ್ಜಿದಾರರಿಗೆ ಕಡತಗಳ ಪ್ರಗತಿಯ ಬಗ್ಗೆ ಮಾಹಿತಿಯನ್ನು ನಿಯಮಬದ್ಧವಾಗಿ ನೀಡುತ್ತಿರುವುದು ಕಂಡು ಬಂದಿರುವುದಿಲ್ಲ. ಅರ್ಜಿಗಳ ವಿಲೇವಾರಿಯಲ್ಲಿ ಕರ್ತವ್ಯ ಲೋಪ, ನಿರ್ಲಕ್ಷತನ, ಎಸಗಿರುವ ಅಧಿಕಾರಿ\ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ವರದಿ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love