ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ವಿಲೇವಾರಿ

Spread the love

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ವಿಲೇವಾರಿ

ಮಂಗಳೂರು:  ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ವಿಲೇವಾರಿಯು ದಿನಾಂಕ: 24-03-2023ರಂದು ಅಪರಾಹ್ನ 12-00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ M/s Ramky Energy and Environment Ltd ಎಂಬಲ್ಲಿ ನಡೆಯಿತು.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 8 ಠಾಣೆಗಳ ವಿಲೇವಾರಿಯಾದ 11 ಕೆಜಿ 194 ಗ್ರಾಂ ಗಾಂಜಾ ಮತ್ತು 14 ಮಿ.ಗ್ರಾಂ ಎಂಡಿಎಂ ಎ ಮಾದಕ ವಸ್ತುಗಳ ವಿಲೇವಾರಿ ನಡೆಯಿತು.

ಸೆನ್ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 1 ಕೆಜಿ 812 ಗ್ರಾಂ ಗಾಂಜಾವನ್ನು ವಿಲೇವಾರಿ ಮಾಡಲಾಯಿತು.

ಸದ್ರಿ ಪ್ರಕರಣಗಳಲ್ಲಿ ಒಟ್ಟು 06 ಆರೋಪಿಗಳನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳಲ್ಲಿ ಒಟ್ಟು 1 ಕೆಜಿ 328 ಗ್ರಾಂ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ಸದ್ರಿ ಪ್ರಕರಣಗಳಲ್ಲಿ ಒಟ್ಟು 17 ಆರೋಪಿಗಳನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪಣಂಬೂರು ಪೊಲೀಸ್ ಠಾಣೆಯಲ್ಲಿ ಒಟ್ಟು 1 ಪ್ರಕರಣದಲ್ಲಿ 520 ಗ್ರಾಂ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ಸದ್ರಿ ಪ್ರಕರಣದಲ್ಲಿ ಒಟ್ಟು 03 ಆರೋಪಿಗಳನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು ಪ್ರಕರಣದಲ್ಲಿ 1 ಕೆಜಿ 218 ಗ್ರಾಂ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ಸದ್ಯ ಪ್ರಕರಣದಲ್ಲಿ ಒಟ್ಟು 01 ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 2 ಕೆಜಿ 456 ಗ್ರಾಂ ಗಾಂಜಾ ಮತ್ತು 0,014 ಗ್ರಾಂ ಎಂಡಿಎಂಎ ಯನ್ನು ವಿಲೇವಾರಿ ಮಾಡಲಾಯಿತು. ಸದ್ರಿ ಪ್ರಕರಣಗಳಲ್ಲಿ ಒಟ್ಟು 10 ಆರೋಪಿಗಳನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳಲ್ಲಿ ಒಟ್ಟು 1 ಕೆಜಿ 510 ಗ್ರಾಂ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ಸದ್ರಿ ಪ್ರಕರಣಗಳಲ್ಲಿ ಒಟ್ಟು 04 ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಜಪೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳಲ್ಲಿ ಒಟ್ಟು 1 ಕೆಜಿ 660 ಗ್ರಾಂ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ಸರಿ ಪ್ರಕರಣಗಳಲ್ಲಿ ಒಟ್ಟು 14 ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ ಒಟ್ಟು 700 ಗ್ರಾಂ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ಈ ಪ್ರಕರಣಗಳಲ್ಲಿ ಸದಿ ಪ್ರಕರಣದ ಒಟ್ಟು 02 ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 


Spread the love