ಮಂಗಳೂರು:  ನಿರುದ್ಯೋಗ ಹೆಚ್ಚಳದ ವಿರುದ್ಧ ಎನ್ ಎಸ್ ಯು ಐ ಪ್ರತಿಭಟನೆ

Spread the love

ಮಂಗಳೂರು:  ನಿರುದ್ಯೋಗ ಹೆಚ್ಚಳದ ವಿರುದ್ಧ ಎನ್ ಎಸ್ ಯು ಐ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಯುವ ದಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರುದ್ಯೋಗ ಹೆಚ್ಚಳದ ವಿರುದ್ಧ ಎನ್ ಎಸ್ ಯುಐ ದ.ಕ.ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ಯುವಕರನ್ನು ವಂಚಿಸಿದ್ದು, ಮುಂದಿನ ಚುನಾವಣೆಯಲ್ಲಿ ವಿದ್ಯಾರ್ಥಿಗಳು, ಯುವಕರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದೆ ಎಂದರು.

ಈ ಸಂದರ್ಭದಲ್ಲಿ ಶೌನಕ್ ರೈ, ವಿನಯ್, ಶೇಖ್ ಅಫ್ಸಾನ್, ಅಂಕುಶ್ ರೈ, ಶಫೀಕ್, ಹಬೀಬ್ ಮ್ಯಾಕ್, ಸುನೀಲ್, ಕೌಶಿಕ್, ಶಾದ್ ಮತ್ತಿತರರು ಉಪಸ್ಥಿತರಿದ್ದರು.


Spread the love