ಮಂಗಳೂರು: ಪರವಾನಿಗೆ ಇಲ್ಲದೆ ಗ್ಯಾಸ್ ಸಿಲಿಂಡರ್ ಗಳ ಅಕ್ರಮ ದಾಸ್ತಾನು ಒರ್ವ ವಶಕ್ಕೆ

Spread the love

ಮಂಗಳೂರು: ಪರವಾನಿಗೆ ಇಲ್ಲದೆ ಗ್ಯಾಸ್ ಸಿಲಿಂಡರ್ ಗಳ ಅಕ್ರಮ ದಾಸ್ತಾನು ಒರ್ವ ವಶಕ್ಕೆ

ಮಂಗಳೂರು: ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಗ್ಯಾಸ್ ಸಿಲಿಂಡರ್ ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ ವ್ಯಕ್ತಿಯನ್ನು ಮಂಗಳೂರು ಪೂರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ವ್ಯಕ್ತಿಯನ್ನು ಅಳಕೆ ನಿವಾಸಿ ಶೇಖ್ ಅಶ್ರಫ್ ಉದ್ದೀನ್ (59) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನ ನಿಬಿಡ ವಸತಿ ಸಂಕೀರ್ಣದ ಬಳಿ ಮಂಗಳೂರು ಗ್ಯಾಸ್ ಲೈಟ್ ಅಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಗ್ಯಾಸ್ ಸಿಲಿಂಡರ್ ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ತಿಳಿದು ಬಂದ ಮಾಹಿತಿಯಂತೆ ಧಾಳಿ ಮಾಡಿ ಅರ್ಧ ಗ್ಯಾಸ್ ತುಂಬಿದ 03 ಗೃಹ ಬಳಕೆಯ ಇಂಡೇನ್ ಮತ್ತು ಹೆಚ್.ಪಿ ಗ್ಯಾಸ್ ಸಿಲಿಂಡರ್ ಗಳು ಸೇರಿದಂತೆ ಒಟ್ಟು 26 ವಿವಿಧ ಆಳತೆಯ ಗ್ಯಾಸ್ ಸಿಲಿಂಡರ್ ಗಳನ್ನು ಪತ್ತೆ ಹಚ್ಚಿದ್ದಾರೆ
ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.


Spread the love