Spread the love
ಮಂಗಳೂರು: ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಎಎಸ್ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ
ಮಂಗಳೂರು: ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ರಾಜೇಶ್ ಹೆಗ್ಡೆ ಅವರು ಹೃದಯಾಘಾತದಿಂದ ನಿಧನರಾದರು.
ಕಾಸರಗೋಡು ಜಿಲ್ಲೆಯ ಚಿತ್ತಾರಿ ಮೂಲದವರಾದ ಅವರು ಮಂಗಳೂರಿನ ಉರ್ವಸ್ಟೋರ್ಸ್ ಬಳಿ ವಾಸಿಸುತ್ತಿದ್ದರು. 1993ರ ಬ್ಯಾಚ್ನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿ ತಮ್ಮ ಪ್ರಥಮ ಕರ್ತವ್ಯವನ್ನು ವಿಟ್ಲ ಪೊಲೀಸ್ ಠಾಣೆಯಲ್ಲಿ ನಿರ್ವಹಿಸಿದ್ದರು.
ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಹೆಸರು ಪಡೆದಿದ್ದ ಅವರು 32 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು.
ಅವರನ್ನು ಪತ್ನಿ, ಪುತ್ರ ಹಾಗೂ ಅನೇಕರ ಬಂಧು-ಬಳಗದವರು ಅಗಲಿದ್ದಾರೆ.
Spread the love