Home Mangalorean News Kannada News ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

Spread the love

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಗೆ ಹಿರಿ ಯ ಪೊಲೀಸ್ ಅಧಿಕಾರಿಗಳ ಆಗಮನದ ವೇಳೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಿಬ್ಬಂದಿ ಬದಲಾವಣೆಯ ಬಗ್ಗೆಯೂ ಸಾರ್ವಜನಿಕವಾಗಿ ಬೇಡಿಕೆ ವ್ಯಕ್ತ ವಾಗಿತ್ತು. ಇದೀಗ ಪೊಲೀಸ್ ಕಮಿಷನರ್ 56 ಸಿಬ್ಬಂದಿಯನ್ನು ವರ್ಗಾಯಿಸಿ ಆದೇಶಿಸಿದ್ದಾರೆ.

ವರ್ಗಾವಣೆಗೊಂಡಿರುವವರಲ್ಲಿ ಸಿಸಿಬಿ, ಸೆನ್ ಸೇರಿದಂತೆ ಕಮಿಷನರೇಟ್ ವ್ಯಾಪ್ತಿಗೆ ಒಳಪಡುವ ಠಾಣೆಗಳ ಹಲವು ಪೊಲೀಸರು ಸೇರಿದ್ದಾರೆ.

ಕೆಲ ದಿನಗಳ ಹಿಂದೆ ಕರಾವಳಿಯ ಐಪಿಎಸ್ – ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಬಲಪಡಿಸುವ ಯತ್ನವನ್ನು ರಾಜ್ಯ ಸರಕಾರ ಮಾಡಿತ್ತು.


Spread the love

Exit mobile version