ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ವರ್ಗಾವಣೆ

Spread the love

ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ವರ್ಗಾವಣೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ನಗರ ಡಿಐಜಿ ಮತ್ತು ಸಹಾಯಕ ಕಮೀಷನರ್ ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದು, ಬೆಂಗಳೂರು ಗುಪ್ತಚರ ವಿಭಾಗದ ಡಿಐಜಿಪಿ ಆಗಿದ್ದ ಡಾ| ಎ. ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೂತನ ಕಮೀಷನರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಡಾ| ಎ. ಸುಬ್ರಹ್ಮಣ್ಯೇಶ್ವರ ರಾವ್  ದ.ಕ. ಜಿಲ್ಲಾ ಎಸ್ಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.


Spread the love